masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 48,786 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 1,005 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 04 ಲಕ್ಷದ 11 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,99,459 ಆಗಿದೆ.

ಕಳೆದ 24 ಗಂಟೆಗಳಲ್ಲಿ 61,588 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 94 ಲಕ್ಷದ 88 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5 ಲಕ್ಷದ 23 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.97 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.31 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 19.21 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 41.20 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 27.60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 33.57 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply