ದೇಶದಲ್ಲಿ ಕೊರೋನಾ ಹೊಸ ದಾಖಲೆ.. 90 ಸಾವಿರ ದಾಟಿದ ಸೋಂಕಿತರು..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ ಇಷ್ಟು ಜನರಿಗೆ ಕಾಯಿಲೆ ಹರಡಿರೋದು ದೇಶದಲ್ಲಿ ಇದೇ ಮೊದಲು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90,927ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 120 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದುವರೆಗೆ 2,872 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 34,109 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದ ವಿವಿಧ ಆಸ್ಪತ್ರೆಗಳಲ್ಲಿ 53,946‬ ಮಂದಿ ಕಾಯಿಲೆ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ದೇಶದಲ್ಲಿರುವ ಆ್ಯಕ್ಟಿವ್ ಪ್ರಕರಣಗಳಾಗಿವೆ.

ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 30 ಸಾವಿರ ದಾಟಿದ್ದು, ಒಂದೇ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗುಜರಾತ್​ನಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ. ತಮಿಳುನಾಡು, ದೆಹಲಿ ಮತ್ತು ರಾಜಸ್ಥಾನ ನಂತರದ ಸ್ಥಾನದಲ್ಲಿವೆ. ಈ ಪಟ್ಟಿಯಲ್ಲಿ ಕರ್ನಾಟಕ 14ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply