ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ.. ಪೊಲೀಸರನ್ನೂ ಬಿಡ್ತಿಲ್ಲ ಮಹಾಮಾರಿ

masthmagaa.com:

ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 7 ಮಂದಿ ಪೊಲೀಸರನ್ನು ಬಲಿ ಪಡೆದುಕೊಂಡಿದೆ. ಜೊತೆಗೆ ಒಂದೇ ದಿನ 511 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,912 ದಾಟಿದ್ದು, ಸಾವಿನ ಸಂಖ್ಯೆ 173ಕ್ಕೆ ಏರಿಕೆಯಾಗಿದೆ. ಇದುವರೆಗೆ 13,719 ಮಂದಿ ಪೊಲೀಸರು ಗುಣಮುಖರಾಗಿದ್ದಾರೆ. ಸದ್ಯ 3,020 ಪೊಲೀಸರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತ ಮಹಾರಾಷ್ಟ್ರ ಪೊಲೀಸ್ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 20,489 ಜನರಿಗೆ ಸೋಂಕು ತಗುಲಿದ್ದು 312 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,83,862 ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 26,276 ಆಗಿದೆ. ಸತತ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೊಸ ಹೊಸ ದಾಖಲೆ ಬರೆದು ಮುನ್ನುಗ್ಗುತ್ತಿದೆ.

-masthmagaa.com

Contact Us for Advertisement

Leave a Reply