masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 51,667 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 1,329 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 01 ಲಕ್ಷದ 34 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,93,310 ಆಗಿದೆ.

ಕಳೆದ 24 ಗಂಟೆಗಳಲ್ಲಿ 64,527 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 91 ಲಕ್ಷದ 28 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6 ಲಕ್ಷದ 12 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.66 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.31 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 17.35 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 39.95 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 60.73 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 30.79 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply