ಉತ್ತರ ಪ್ರದೇಶದಲ್ಲಿ 3 ದಿನಗಳಲ್ಲಿ 73 ಮಂದಿ ಸಾವು..

ಉತ್ತರ ಪ್ರದೇಶದಲ್ಲಿ ಮಳೆಯಬ್ಬರ ಜೋರಾಗಿದ್ದು, ಹಲವೆಡೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಕಳೆದ 3 ದಿನಗಳಲ್ಲಿ ಮಳೆಗೆ 73 ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಭಾರಿ ಪ್ರಮಾಣದಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಪ್ರಯಾಗ್ ರಾಜ್‍ನಲ್ಲಿ 102 ಮಿಲಿಮೀಟರ್ ಮಳೆಯಾಗಿದ್ದರೆ, ವಾರಣಾಸಿಯಲ್ಲಿ 84 ಮಿ.ಮೀ. ಮಳೆಯಾಗಿದೆ. ಇನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇನ್ನು ಭಾರಿ ಮಳೆಗೆ ಬಿಹಾರದ ಹಲವು ಭಾಗಗಳು ಪ್ರವಾಹಕ್ಕೆ ತುತ್ತಾಗಿವೆ. ನಾಳೆಯೂ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಶಾಲಾ ಕಾಲೇಜುಗಳಿಗೆ ಮಂಗಳವಾರದವರೆಗೆ ರಜೆ ನೀಡಲಾಗಿದೆ.

Contact Us for Advertisement

Leave a Reply