700ರ ಗಡಿ ದಾಟಿದ ಸೋಂಕಿತರ ಸಂಖ್ಯೆ, ದಾವಣಗೆರೆಯಲ್ಲಿ ಮಹಿಳೆ ಸಾವು

masthmagaa.com:

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇವತ್ತು ಮಧ್ಯಾಹ್ನದವರೆಗೆ 8 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಅಂತ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರಲ್ಲಿ ದಾವಣಗೆರೆ ಹಾಗೂ ಕಲಬುರಗಿಯ ತಲಾ ಮೂವರು, ಬೆಳಗಾವಿಯ ಹಿರೇಬಾಗೇವಾಡಿ ಮತ್ತು ಬೆಂಗಳೂರು ನಗರದ ತಲಾ ಒಬ್ಬರು ಇದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ.

ಇನ್ನು ದಾವಣಗೆರೆಯಲ್ಲಿ ಸೋಂಕು ದೃಢಪಟ್ಟ 55 ವರ್ಷದ ಮಹಿಳೆ (ರೋಗಿ ನಂಬರ್ 694) ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

-masthmagaa.com

 

Contact Us for Advertisement

Leave a Reply