masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 89,129 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 714 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 23 ಲಕ್ಷದ 92 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,64,110 ಆಗಿದೆ.

ಕಳೆದ 24 ಗಂಟೆಗಳಲ್ಲಿ 44,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 15 ಲಕ್ಷದ 69ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6 ಲಕ್ಷದ 58ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 93.36ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.32 ಪರ್ಸೆಂಟ್ ಇದೆ. ಏಪ್ರೀಲ್‌ 2ರಂದು 10.46ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 24.69 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 30.93ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 7.30ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply