ದೇಶದಲ್ಲಿ 24 ಗಂಟೇಲಿ ಎಷ್ಟು ಜನರಿಗೆ ಕೊರೋನಾ? ಎಷ್ಟು ಜನರಿಗೆ ಲಸಿಕೆ?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,102 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 117 ಸೋಂಕಿತರು ಮೃತಪಟ್ಟಿದ್ದಾರೆ. ಜೂನ್​ ಬಳಿಕ ದೃಢಪಟ್ಟ ಅತಿ ಕಮ್ಮಿ ಕೊರೋನಾ ಕೇಸ್ ಇದಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 6 ಲಕ್ಷದ 76 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,53,587ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 15,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 3 ಲಕ್ಷದ 45 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 77 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.90 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.43 ಪರ್ಸೆಂಟ್ ಇದೆ. ಜನವರಿ 25ರಂದು 7.25 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 19.30 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 4.08 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 20.23 ಲಕ್ಷ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply