ಕೊರೋನಾ 2ನೇ ಅಲೆ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

masthmagaa.com:

ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಹಿನ್ನೆಲೆ ಪ್ರಧಾನಿ ಮೋದಿ ಇವತ್ತು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಂಪುಟ ಕಾರ್ಯದರ್ಶಿ, ಪ್ರಧಾನಿ ಮೋದಿಯ ಪ್ರಿನ್ಸಿಪಲ್ ಸೆಕ್ರೆಟರಿ, ಹೆಲ್ತ್​ ಸೆಕ್ರೆಟರಿ ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಭಾಗವಹಿಸಿದ್ರು. ಕೊರೋನಾ ಮತ್ತು ವ್ಯಾಕ್ಸಿನೇಷನ್​ಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ ಅನ್ನೋದು ಗೊತ್ತಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 93,249 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 513 ಸೋಂಕಿತರು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ ಮಧ್ಯಭಾಗದ ಬಳಿಕ ದೃಢಪಟ್ಟ ಅತಿಹೆಚ್ಚು ಕೇಸ್ ಇದಾಗಿದೆ. ಮಹಾರಾಷ್ಟ್ರದಲ್ಲಿ ನಿನ್ನೆ 49,000 ಜನರಿಗೆ ಸೋಂಕು ದೃಢಪಟ್ಟಿದೆ.

-masthmagaa.com

Contact Us for Advertisement

Leave a Reply