masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 93,249 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 513 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 24 ಲಕ್ಷದ 85 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,64,623 ಆಗಿದೆ.

ಕಳೆದ 24 ಗಂಟೆಗಳಲ್ಲಿ 60,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 16 ಲಕ್ಷದ 29ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6 ಲಕ್ಷದ 91ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 93.14ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.32 ಪರ್ಸೆಂಟ್ ಇದೆ. ಏಪ್ರೀಲ್‌ 3ರಂದು 11.66ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 24.81 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 27.38ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 7.59ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply