masthmagaa.com:
ಟೋಕಿಯೊ ಒಲಂಪಿಕ್ಸ್ ಚಾಂಪಿಯನ್ ಭಾರತದ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಕತಾರ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಡೈಮಂಡ್ ಲೀಗ್ನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಅಂದ್ಹಾಗೆ ಕಳೆದ ವರ್ಷ ಸ್ವಿಜರ್ಲೆಂಡ್ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ನೀರಜ್ ಚೋಪ್ರಾ, ಈ ವರ್ಷವೂ ತಮ್ಮ ಚಾಂಪಿಯನ್ ಪಟ್ಟವನ್ನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ನೀರಜ್ರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ತಿಳಿಸಿದ್ದಾರೆ.
-masthmagaa.com
Contact Us for Advertisement