masthmagaa.com:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 9,996 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದು ಈವರೆಗಿನ ಅತಿ ಹೆಚ್ಚು ಪ್ರಕರಣವಾಗಿದೆ. ನಿನ್ನೆ 9,985 ಜನರಿಗೆ ಸೋಂಕು ತಗುಲಿತ್ತು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 2,86,579 ಆಗಿದೆ.
ಕಳೆದ 24 ಗಂಟೆಗಳಲ್ಲಿ 357 ಜನ ಮೃತಪಟ್ಟಿದ್ದಾರೆ. ಇದು ಕೂಡ ಕೊರೋನಾಗೆ ಸಂಬಂಧಿಸಿದಂತೆ ಈವರೆಗಿನ ಅತಿ ಹೆಚ್ಚು ಸಾವಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 8 ಸಾವಿರ ಗಡಿ ದಾಟಿದ್ದು 8,102 ಆಗಿದೆ. ಇದುವರೆಗೆ 1,41,029 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 1,37,448 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 94 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 36 ಸಾವಿರ, ದೆಹಲಿಯಲ್ಲಿ 32 ಸಾವಿರ ಮತ್ತು ಗುಜರಾತ್ನಲ್ಲಿ 21 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ.
-masthmagaa.com
Contact Us for Advertisement