masthmagaa.com:
ಈ ಬಾರಿಯ ಐಪಿಎಲ್ನಲ್ಲಿ ಸತತ ಸೋಲು ಕಾಣುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಶುಭಸುದ್ದಿ. ಹೊಟ್ಟೆ ನೋವಿನ ಕಾರಣದಿಂದಾಗಿ ತಂಡದಿಂದ ದೂರವಿದ್ದ ಆರಂಭಿಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಗುಣಮುಖರಾಗಿದ್ದಾರೆ. ಹೀಗಾಗಿ ಗುರುವಾರ ನಡೆಯಲಿರುವ ಪಂಜಾಬ್ ಮತ್ತು ಆರ್ಸಿಬಿ ನಡುವಿನ ಪಂದ್ಯದಲ್ಲಿ ಗೇಲ್ ಕಣಕ್ಕಿಳಿಯುವ ಸಾಧ್ಯತೆ ಇದೆ.
ಹೊಟ್ಟೆಯಲ್ಲಿ ಇನ್ಫೆಕ್ಷನ್ ಆದ ಕಾರಣ ಅವರು ಈ ಹಿಂದಿನ ಪಂದ್ಯಗಳಲ್ಲಿ ಆಡಿರಲಿಲ್ಲ. ಅಲ್ಲದೆ ಆಸ್ಪತ್ರೆಗೂ ದಾಖಲಾಗಿದ್ದರು. ಆದ್ರೀಗ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಅಂತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ತಿಳಿಸಿದೆ. ಸದ್ಯ ಅವರು ತಂಡದ ಇತರ ಸದಸ್ಯರ ಜೊತೆ ನೆಟ್ ಪ್ರಾಕ್ಟಿಸ್ನಲ್ಲಿ ಭಾಗವಹಿಸಿದ್ದಾರೆ.
ಅಂದ್ಹಾಗೆ ಆಡಿದ 7 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಸಾಧಿಸಿರುವ ಪಂಜಾಬ್ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇಂತಹ ಸಂದರ್ಭದಲ್ಲಿ ತಂಡಕ್ಕೆ ಕ್ರಿಸ್ ಗೇಲ್ ಕಮ್ಬ್ಯಾಕ್ ಮಾಡಿರೋದು ಉತ್ತಮ ಬೆಳವಣಿಗೆ. ಆದ್ರೆ ಆರ್ಸಿಬಿ ದೃಷ್ಟಿಯಿಂದ ಒಳ್ಳೆಯ ವಿಚಾರವಲ್ಲ. ಯಾಕಂದ್ರೆ ಈ ಹಿಂದಿನ ಸೀಸ್ನ್ಗಳಿಗೆ ಹೋಲಿಸಿದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಉತ್ತಮ ಫಾರ್ಮ್ನಲ್ಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದ್ರೆ ಗುರುವಾರ ನಡೆಯಲಿರುವ ಪಂದ್ಯದಲ್ಲಿ ಗೇಲ್ ಕಣಕ್ಕಿಳಿದ್ರೆ ಅವರನ್ನ ಕಟ್ಟಿ ಹಾಕೋದು ಹೇಗೆ ಅನ್ನೋ ಚರ್ಚೆ ಈಗ ಆರ್ಸಿಬಿ ಕ್ಯಾಂಪ್ನಲ್ಲಿ ನಡೆಯುತ್ತಿದೆ.
-masthmagaa.com
Contact Us for Advertisement