masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,542 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 73 ಮಂದಿ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,51,390 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 10,356 ಆಗಿದೆ.

ಕಳೆದ 24 ಗಂಟೆಯಲ್ಲಿ 8,580 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 6,28,588 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 1,12,427 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 946 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

-masthmagaa.com

Contact Us for Advertisement

Leave a Reply