masthmagaa.com:
ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ.
ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.
-masthmagaa.com
Contact Us for Advertisement