ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ..! ಇಲ್ಲಿದೆ ನೋಡಿ ಹವಾಮಾನ ಮಾಹಿತಿ

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹೂನವಿನಾಡು ಎಂಬಲ್ಲಿ ಅತಿಹೆಚ್ಚು 161.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply