ಮರಗಳನ್ನು ಕಡಿಯಬೇಡಿ..ಮಹಾರಾಷ್ಟ್ರಕ್ಕೆ `ಸುಪ್ರೀಂ’ ಚಾಟಿ..!

ಮುಂಬೈನ ಆರೆ ಕಾಲೋನಿಯಲ್ಲಿ ಮೆಟ್ರೋಗೆ ರಸ್ತೆ ನಿರ್ಮಾಣ ಮಾಡಲು ಮರಗಳನ್ನು ಕಡಿಯೋದಕ್ಕೆ ಸುಪ್ರೀಂಕೋರ್ಟ್ ಬ್ರೇಕ್ ಹಾಕಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರುಣ್ ಮಿಶ್ರಾ ಮತ್ತು ನ್ಯಾ.ಅಶೋಕ್ ಭೂಷಣ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

ಮರಗಳನ್ನು ಕಡಿಯದಂತೆ ತಡೆಯಬೇಕು ಎಂದು ನಿನ್ನೆ ಕೆಲ ಕಾನೂನು ವಿದ್ಯಾರ್ಥಿಗಳು ನಿನ್ನೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿ, ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದೆ. ಅಲ್ಲದೆ ಮರಗಳನ್ನು ಕಡಿಯದಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿ, ಮಧ್ಯಂತರ ಆದೇಶ ಹೊರಡಿಸಿದೆ.

Contact Us for Advertisement

Leave a Reply