ಮಹಾರಾಷ್ಟ್ರದಲ್ಲಿ ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಗೋವಿಂದಾ!

masthmagaa.com:

ಬಾಲಿವುಡ್‌ನ ಖ್ಯಾತ ಹಿರಿಯ ನಟ ಗೋವಿಂದ, ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆಯವ್ರು ಗೋವಿಂದ ಅವ್ರನ್ನ ತಮ್ಮ ಪಕ್ಷಕ್ಕೆ ಬರಮಾಡಿಕೊಂಡ್ರು. ಇನ್ನು ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಶಿವಸೇನೆಯಿಂದ ಗೋವಿಂದ ಸ್ಪರ್ಧೆ ಮಾಡಲಿದ್ದಾರೆ ಅಂತ ಮಾಹಿತಿ ಲಭ್ಯ ಆಗಿದೆ. ಅಂದ್ಹಾಗೆ 2004ರಿಂದ 2009ರವರೆಗೆ ಗೋವಿಂದ ಕಾಂಗ್ರೆಸ್‌ನಿಂದ ಸಂಸದರಾಗಿ ಆಯ್ಕೆಯಾಗಿದ್ರು. ಬಳಿಕ ರಾಜಕೀಯದಿಂದ ದೂರ ಉಳಿದಿದ್ದ ಅವ್ರು ಈಗ ಬಾಣ ಹಿಡಿದಿದ್ದಾರೆ ಅಂದ್ರೆ ಶಿವಸೇನೆ ಸೇರಿದ್ದಾರೆ.

-masthmagaa.com

Contact Us for Advertisement

Leave a Reply