ಕೂದಲು ತೆಗೆದು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಪ್ರಜ್ವಲ್ ದೇವರಾಜ್‌: ಯಾಕೆ ಗೊತ್ತಾ?

masthmagaa.com:

ಪ್ರಜ್ವಲ್ ಅವರು ಕಳೆದ ಎರಡು ವರ್ಷಗಳಿಂದ ಹೇರ್ ಕಟ್ ಮಾಡಿಸಿರಲಿಲ್ಲ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35 ನೇ ಚಿತ್ರ “ಮಾಫಿಯಾ” ಚಿತ್ರಕ್ಕಾಗಿ ಎರಡು ವರ್ಷಗಳಿಂದ ದಟ್ಟವಾಗಿ ಬೆಳೆದಿದ್ದ ಕೂದಲನ್ನು ಕತ್ತರಿಸಿದ್ದಾರೆ.ಆ ಕೂದಲನ್ನು ಕ್ಯಾನ್ಸರ್ ರೋಗದಿಂದ ಕೂದಲು ಕಳೆದುಕೊಂಡ ರೋಗಿಗಳಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

“ಮಮ್ಮಿ” ಮತ್ತು “ದೇವಕಿ”ಚಿತ್ರಗಳ ಮೂಲಕ ಜನಪ್ರಿಯ ಆಗಿರುವ ಲೋಹಿತ್ ನಿರ್ದೇಶನದಲ್ಲಿ, ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರದ ಮುಹೂರ್ತ ಸಮಾರಂಭ ಡಿಸೆಂಬರ್ 2ರಂದು ನಡೆಯಲಿದೆ. ಚಿತ್ರೀಕರಣ ಡಿಸೆಂಬರ್ ಆರರಿಂದ ಆರಂಭವಾಗಲಿದೆ.

ಪ್ರಜ್ವಲ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್.ಬಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.ತರುಣ್ ಈ ಚಿತ್ರದ ಛಾಯಾಗ್ರಹಕರು.

-masthmagaa.com

Contact Us for Advertisement

Leave a Reply