ನಟಿ ರಮ್ಯಾಗೆ ಕಿಡಿಗೇಡಿ ಇಂದ ಕಿರಿಕಿರಿ; ಪೊಲೀಸ್ ಕಂಪ್ಲೈಂಟ್ ಕೊಟ್ಟ ಮೋಹಕ ತಾರೆ!

masthmagaa.com:

ಇನ್ಸ್ಟಾಗ್ರಾಂನಲ್ಲಿ ವ್ಯಕ್ತಿಯೊಬ್ಬ ನಿಂದಿಸಿದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈ ವ್ಯಕ್ತಿಯ ವಿರುದ್ದ ಸ್ವತಃ ಮೋಹಕ ತಾರೆ ರಮ್ಯಾ ಅವರೇ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಯಾರೋ ಕಿಡಿಗೇಡಿಯೊಬ್ಬ ಇನ್ಸ್ಟಾಗ್ರಾಂ ನಲ್ಲಿ ನಿಂದನೆ ಮಾಡಿದ ಕಾರಣ ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿ ಇರುವ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರಂತೆ. ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಸಿಇಎನ್ ಠಾಣಾಧಿಕಾರಿಗಳು ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply