ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ: 280 ಕ್ಕೂ ಹೆಚ್ಚು ಜನರ ದುರ್ಮರಣ.!

masthmagaa.com:

ತಾಲಿಬಾನ್‌ ಆಡಳಿತದಲ್ಲಿ ನಲುಗ್ತಾ ಇರೋ ಅಫ್ಘಾನಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. 6.1 ತೀವ್ರತೆಯ ಭೀಕರ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆಗೆ ಕನಿಷ್ಠ 280 ಜನರು ಮೃತಪಟ್ಟಿದ್ದು, ನೂರಾರು ಜನ ಗಾಯಗೊಂಡಿದ್ದಾರೆ ಅಂತ ಹೇಳಲಾಗ್ತಾಯಿದೆ. ಕ್ಷಣ ಕ್ಷಣಕ್ಕೂ ಸಾವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇನ್ನು ಭೂಕಂಪವು ಪಾಕಿಸ್ತಾನದ ಗಡಿಯ ಸಮೀಪವಿರುವ ಖೋಸ್ಟ್ ನಗರದಿಂದ ಸುಮಾರು 44-51 ಕಿಮೀ ಆಳದಲ್ಲಿ ಸಂಭವಿಸಿದೆ ಅಂತ ಅಮೆರಿಕಾದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

-masthmagaa.com

Contact Us for Advertisement

Leave a Reply