ಲಂಚ ಕೇಸ್​​​​​ ನಿವೃತ್ತ ಜಡ್ಜ್ ನೇತೃತ್ವದಲ್ಲಿ ತನಿಖೆ: ಅನಿಲ್ ದೇಶ್​​ಮುಖ್​​​

masthmagaa.com:

ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ನಿವೃತ್ತ ಜಡ್ಜ್​​ ನೇತೃತ್ವದಲ್ಲಿ ತನಿಖೆ ನಡೆಸಲು ಸಿಎಂ ಉದ್ಧವ್ ಠಾಕ್ರೆ ನಿರ್ಧರಿಸಿದ್ದಾರೆ. ಈ ಬಗ್ಗೆ ಗೃಹಸಚಿವ ಅನಿಲ್ ದೇಶ್​​ಮುಖ್ ಮಾಹಿತಿ ನೀಡಿದ್ದಾರೆ. ಈ ಹಿಂದೆ ಮುಂಬೈ ಪೊಲೀಸ್ ಕಮಿಷನರ್ ಆಗಿದ್ದ ಪರಮ್​ ಬೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಪತ್ರೆ ಬರೆದು ಅನಿಲ್ ದೇಶ್ ಮುಖ್ ವಿರುದ್ಧ ಗಂಭೀರ ಆರೋಪ ಮಾಡಿದ್ರು.

ತಿಂಗಳಿಗೆ 100 ಕೋಟಿ ಕಲೆಕ್ಷನ್ ಮಾಡುವ ಟಾರ್ಗೆಟ್ ನೀಡಿದ್ರು ಅಂತ ಅಂತೆಲ್ಲಾ ಪತ್ರದಲ್ಲಿ ಉಲ್ಲೇಖಿಸಿದ್ರು. ಈ ಬಗ್ಗೆ ಭಾರಿ ಟೀಕೆ ಕೇಳಿ ಬಂದ ಬೆನ್ನಲ್ಲೇ ಎನ್​​ಸಿಪಿ ಪಕ್ಷದವರಾದ ಗೃಹಸಚಿವ ಅನಿಲ್ ದೇಶ್​ಮುಖ್ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದು ಉನ್ನತ ತನಿಖೆ ನಡೆಸುವಂತೆ ಮನವಿ ಮಾಡಿದ್ರು. ಅದರಂತೆ ಈಗ ಹೈಕೋರ್ಟ್​​​​ನ ನಿವೃತ್ತ ಜಡ್ಜ್​ ನೇತೃತ್ವದಲ್ಲಿ ತನಿಖೆ ನಡೆಸಲು ಸಿಎಂ ಒಪ್ಪಿಕೊಂಡಿದ್ದಾರೆ ಅಂತ ಅನಿಲ್ ದೇಶ್ ಮುಖ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply