ಪರೀಕ್ಷಾ ಅಕ್ರಮ ತಡೆಯಲು AI ಮೊರೆ ಹೋದ KPSC!

masthmagaa.com:

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಇದೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಬಳಸಲು KPSC ನಿರ್ಧರಿಸಿದೆ. ಜೊತೆಗೆ ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರು ಧರಿಸುವ ಶರ್ಟ್‌ ಬಟನ್ ಅಥವಾ ಕಾಲರ್‌ನಲ್ಲಿ ಅತಿಸೂಕ್ಷ್ಮಕ್ಯಾಮೆರಾ ಅಳವಡಿಸಿ ಇಡೀ ಕೇಂದ್ರದಲ್ಲಿ ನಡೆಯುವ ಚಟುವಟಿಕೆಯನ್ನು ಚಿತ್ರೀಕರಿಸಿ, ನಿಗಾ ವಹಿಸುವ ವ್ಯವಸ್ಥೆಯನ್ನೂ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಈ ಸುಧಾರಣಾ ಕ್ರಮಗಳ ಅನುಷ್ಠಾನಕ್ಕೆ ಆಯೋಗದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಅಂತ KPSC ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿದ್ದಾರೆ. ಅಂದ್ಹಾಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಪಿಎಸ್‌ಸಿ ಪರೀಕ್ಷೆಗಳನ್ನ ನಡೆಸುತ್ತದೆ.

-masthmagaa.com

Contact Us for Advertisement

Leave a Reply