ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ನಡೆಸಿದ ನಮೋ!

masthmagaa.com:

ನಾಳೆಯಿಂದ ಮಳೆಗಾಲದ ಸಂಸತ್ ಅಧಿವೇಶನ ಶುರುವಾಗಲಿದೆ. ಅದಕ್ಕೂ ಮುನ್ನ ಇವತ್ತು ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ರು. ಸಂಸತ್ ಕಲಾಪವನ್ನು ಸುಗಮವಾಗಿ ನಡೆಯಲು ಬಿಡುವಂತೆ ಮನವಿ ಮಾಡಲು ಈ ಸಭೆ ಕರೆಯಲಾಗಿತ್ತು. ಪ್ರತಿ ಅಧಿವೇಶನಕ್ಕೂ ಮುನ್ನ ಈ ರೀತಿ ಸಭೆ ಕರೆಯೋದು, ಗಲಾಟೆ ಮಾಡದೇ ಅಧಿವೇಶನಕ್ಕೆ ಅವಕಾಶ ನೀಡಿ ಅಂತ ಮನವಿ ಮಾಡೋದು ಮೊದಲಿಂದಲೂ ನಡೆದುಕೊಂಡು ಬಂದಿದೆ. ಈ ಅಧಿವೇಶನದಲ್ಲಿ ಸರ್ಕಾರ 30 ಮಸೂದೆಗಳನ್ನು ಮಂಡಿಸಲು ಸಿದ್ಧತೆ ನಡೆಸಿದೆ. ಇನ್ನು ಕೊರೋನಾ, ಹಣದುಬ್ಬರ, ತೈಲದರ ಏರಿಕೆ, ರಫೇಲ್ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಿದ್ಧವಾಗಿವೆ. ನಾಳೆಯಿಂದ ಆಗಸ್ಟ್​ 13ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಲೋಕಸಭೆಯಲ್ಲಿ ಕಾಂಗ್ರೆಸ್​​​ನ ನಾಯಕತ್ವವನ್ನು ಬೇರೆಯವರಿಗೆ ವಹಿಸಲಾಗುತ್ತೆ ಅನ್ನೋ ಚರ್ಚೆ ಶುರುವಾಗಿತ್ತು. ಆದ್ರೆ ಲೋಕಸಭೆ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಮಾಡಿಲ್ಲ. ಬದಲಾಗಿ ಅಧಿರ್ ರಂಜನ್ ಚೌಧರಿಯೇ ಮುಂದುವರಿಯಲಿದ್ದಾರೆ. ಇನ್ನುಳಿದಂತೆ ಜಿ 23 ಬಂಡಾಯ ನಾಯಕರ ಪೈಕಿ ಕೆಲವರಿಗೆ ಕೆಲವೊಂದು ಜವಾಬ್ದಾರಿಗಳನ್ನು ನೀಡಲಾಗಿದೆ.

-masthmagaa.com

Contact Us for Advertisement

Leave a Reply