ಜಮ್ಮು ಕಾಶ್ಮೀರದಲ್ಲಿ ಸೋಮವಾರದಿಂದ ಮೊಬೈಲ್ ಸೇವೆ ಆರಂಭ

ಜಮ್ಮು ಕಾಶ್ಮೀರದಲ್ಲಿ ಎಲ್ಲಾ ಪೋಸ್ಟ್ ಪೇಡ್ ಮೊಬೈಲ್ ಸೇವೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಕೆಲವೊಂದು ಪ್ರದೇಶಗಳಲ್ಲಿ ಈಗಾಗಲೇ ಸೇವೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರದಲ್ಲಿ ಶನಿವಾರದಿಂದಲೇ ಪೋಸ್ಟ್ ಪೇಡ್ ಮೊಬೈಲ್ ಸೇವೆ ಆರಂಭವಾಗಬೇಕಿತ್ತು. ಆದ್ರೆ ಕೆಲವು ಕಾರಣಗಳಿಂದ ಇವತ್ತಿನ ಬದಲಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಆರಂಭಿಸಲಾಗುತ್ತೆ ಅಂತ ಹೇಳಿದೆ.

ಜಮ್ಮು ಕಾಶ್ಮೀರಕ್ಕೆ 370ನೇ ವಿಧಿಯನ್ವಯ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಮೊಬೈಲ್ ಸೇವೆಗಳ ಮೇಲೆ ನಿರ್ಬಂಧ ವಿಧಿಸಲಾಗಿತ್ತು. ಇದ್ರಿಂದ ಕಾಶ್ಮೀರದ ಜನತೆಗೆ ತುಂಬಾ ಸಮಸ್ಯೆಗಳು ಎದುರಾಗಿದ್ದವು. ಅದ್ರಲ್ಲೂ ಇಲ್ಲಿನ ವ್ಯಾಪಾರಿಗಳು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ಮೊಬೈಲ್ ಸೇವೆಗೆ ಅವಕಾಶ ನೀಡಿದ್ದರೂ ಕೂಡ ಇಂಟರ್ನೆಟ್ ಮೇಲೆ ಹೇರಲಾಗಿದ್ದ ನಿರ್ಬಂಧ ಸಡಿಲಿಸಿಲ್ಲ.

Contact Us for Advertisement

Leave a Reply