ಬಿಜೆಪಿಯೊಂದಿಗೆ ಮೈತ್ರಿ! ಮಾಜಿ ಸಿಎಂ ಕುಮಾರಸ್ವಾಮಿಯವರಿಂದ ಅಧಿಕೃತ ಘೋಷಣೆ!

masthmagaa.com:

ಬಿಜೆಪಿ -ಜೆಡಿಎಸ್‌ ಮೈತ್ರಿಯ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಘೋಷಿಸಿದ್ರೂ, ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ ಅಂತ ಹೇಳುವ ಮೂಲಕ ಜೆಡಿಎಸ್‌ ಗೊಂದಲ ಮೂಡಿಸಿತ್ತು. ಆದ್ರೆ ಇಂದು ಮೈತ್ರಿ ಬಗ್ಗೆ ಅಧಿಕೃತವಾಗಿ ಜೆಡಿಎಸ್‌ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮುಂದಿನ ವರ್ಷದ ಲೋಕಸಭೆ ಚುನಾವಣೆ ಎದುರಿಸೋದಾಗಿ ಅಧಿಕೃತವಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಮೈತ್ರಿ ಅವಶ್ಯಕ. ಹಾಗಾಗಿ, ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನ ಜಂಟಿಯಾಗಿ ಎದುರಿಸಲಿದ್ದೇವೆ. ಇದ್ರಿಂದ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಅವಕಾಶವಾಗುತ್ತದೆ ಎಂದಿದ್ದಾರೆ. ಇದೇ ಸೆಪ್ಟಂಬರ್ 21ರಂದು‌ ಅಂದ್ರೆ ಗುರುವಾರ ತಾವು ದಿಲ್ಲಿಗೆ ತೆರಳಲಿರುವುದಾಗಿ ಹೇಳಿದ್ದಾರೆ. ಜೊತೆಗೆ ಮೈತ್ರಿಯ ಮುಂದಿನ ನಡೆಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು. ತುಂಬಾ ಮಹತ್ವದ ಕ್ಷೇತ್ರಗಳಲ್ಲಿ ಸ್ಪರ್ಧೆ ಹೇಗೆ ಅನ್ನೊ ವಿಚಾರಗಳನ್ನ ಚರ್ಚಿಸಲಾಗುತ್ತದೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply