ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಸಿಬಿಐ ಡ್ರಿಲ್..!

ಜನಪ್ರತಿನಿಧಿಗಳು ಮತ್ತು ಆಪ್ತರ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಕೆಎಸ್‍ಆರ್‍ಪಿಯ ಎಡಿಜಿಪಿ ಆಗಿರೋ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್‍ಗೆ ಸಂಕಷ್ಟ ಎದುರಾಗಿದೆ. ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿರೋ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅಲೋಕ್ ಕುಮಾರ್ ಬೆಂಗಳೂರು ಕಮಿಷನರ್ ಆಗಿದ್ದಾಗ ಫೋನ್ ಕದ್ದಾಲಿಕೆ ನಡೆದಿದ್ದು, ಅವರೇ ಎಲ್ಲಾ ಆಡಿಯೋವನ್ನು ಪೆನ್‍ಡ್ರೈವ್‍ಗೆ ಕಾಪಿ ಮಾಡಿಸಿದ್ದರು ಎಂಬ ಆರೋಪವಿದೆ. ಹೀಗಾಗಿ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಅಲೋಕ್ ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ನಡೆಸ್ತಿದ್ದಾರೆ. ಅಲ್ಲದೆ ಕಳೆದೊಂದು ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದು, ಪೆನ್‍ಡ್ರೈವ್‍ಗೆ ಹುಡುಕಾಟ ನಡೆಸಿದ್ದಾರೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ವಿರೋಧ ಪಕ್ಷ, ಆಡಳಿತ ಪಕ್ಷದ ನಾಯಕರು, ಅವರ ಸಂಬಂಧಿಕರು ಮತ್ತು ಅಧಿಕಾರಿಗಳ ಫೋನ್ ಕದ್ದಲಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸೈಬರ್ ಕ್ರೈಂ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

Contact Us for Advertisement

Leave a Reply