ಪಶ್ಚಿಮ ಬಂಗಾಳದಲ್ಲೂ ಅಮಾನವೀಯ ಘಟನೆ: ಅರೆಬೆತ್ತಲೆಗೊಳಿಸಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ

masthmagaa.com:

ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೇ ಇದೇ ರೀತಿಯ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು ಮಹಿಳೆಯರನ್ನ ಥಳಿಸಿ ಅರೆಬೆತ್ತಲೆಗೊಳಿಸಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಘಟನೆ ಜುಲೈ 19ರಂದು ನಡೆದಿದೆ ಅಂತ ಹೇಳಲಾಗ್ತಿದೆ. ಮಾಲ್ಡಾದ ಪಕುವಾಹತ್‌ನಲ್ಲಿ ಸ್ಥಳೀಯರು ಕಳ್ಳತನದ ಶಂಕೆ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ. ಈ ಇಬ್ಬರು ಮಹಿಳೆಯರ ಬಟ್ಟೆಯನ್ನ ಮಹಿಳೆಯರ ಗುಂಪೊಂದು ಹಿಡಿದು ಎಳೆದಾಡಿ ಅರಬೆತ್ತಲೆಗೊಳಿಸಿ ಹಲ್ಲೆ ನಡೆಸುತ್ತಿರೋದು ವಿಡಿಯೋದಲ್ಲಿ ಕಂಡು ಬಂದಿದೆ. ಈ ಕುರಿತು ಪಶ್ಚಿಮ ಬಂಗಾಳ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ. ಈ ಅಮಾನವೀಯ ಘಟನೆ ವಿಡಿಯೋವನ್ನ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಲವೀಯ ಅವ್ರು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

-masthmagaa.com

Contact Us for Advertisement

Leave a Reply