ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಅಮಿತ್‌ ಶಾ ಒಪ್ಪಿಗೆ: ಯಡಿಯೂರಪ್ಪ

masthmagaa.com:

ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಗ್ಗೆ ಓಡಾಡ್ತಿದ್ದ ಊಹಾಪೋಹಗಳು ಈಗ ನಿಜ ಆಗಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಒಪ್ಪಿಕೊಂಡಿದ್ದಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡ್ಕೊಂಡ್ರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ. ಹೀಗಾಗಿ 4 ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ. ಈ ಕಾರಣಕ್ಕೆ ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಅಂತ ಬಿಎಸ್‌ವೈ ಹೇಳಿದ್ದಾರೆ. ಇತ್ತ ಮೈತ್ರಿ ಬಗ್ಗೆ ರಿಯಾಕ್ಟ್‌ ಮಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, ಬಿಜೆಪಿ – ಜೆಡಿಎಸ್‌ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸೋದಾದ್ರೆ ಬಹಳ ಸಂತೋಷ. ಆದರೆ, ಮೈತ್ರಿಯಾದ ನಂತರ ಜೆಡಿಎಸ್‌ ತನ್ನ ಸಿದ್ಧಾಂತ ಹೇಗೆ ಉಳಿಸಿಕೊಳ್ಳುತ್ತದೆ ಗೊತ್ತಿಲ್ಲ, ಪಕ್ಷ ಉಳಿಯುತ್ತೋ ಇಲ್ಲವೋ ಅದೂ ಗೊತ್ತಿಲ್ಲ. ಅವರ ಮೈತ್ರಿಗೆ ನನ್ನ ವಿರೋಧವಂತೂ ಇಲ್ಲ. ಅವರಿಗೆ ಆಲ್‌ ದಿ ಬೆಸ್ಟ್‌ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply