ಜಮ್ಮು ಕಾಶ್ಮೀರದಲ್ಲಿ ಯೋಧರ ಮೇಲೆ ಗ್ರೆನೇಡ್ ದಾಳಿ

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ 2 ತಿಂಗಳ ಬಳಿಕ ಉಗ್ರರು ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಅದೂ ಕೂಡ ಅನಂತ್ ನಾಗ್ ಜಿಲ್ಲೆಯ ಡಿಸಿ ಕಚೇರಿಯ ಗೇಟ್ ಬಳಿಯೇ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಜನ ಗಾಯಗೊಂಡಿದ್ದು, ಟ್ರಾಫಿಕ್ ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ.

ಡಿಸಿ ಕಚೇರಿ ಮುಂದೆ ಸುರಕ್ಷತೆಗೆ ನಿಯೋಜನೆಗೊಂಡಿದ್ದ ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದೆ. ಗಾಯಗೊಂಡವರಲ್ಲಿ ಓರ್ವ ಪತ್ರಕರ್ತ, ಒಂದು 12 ವರ್ಷದ ಮಗು ಮತ್ತು ಸೈನಿಕರೂ ಸೇರಿದ್ದಾರೆ. ಘಟನೆ ಬಳಿಕ ಪ್ರದೇಶವನ್ನು ಸುತ್ತುವರಿದಿರುವ ಯೋಧರು, ಶೋಧ ಕಾರ್ಯ ಆರಂಭಿಸಿದ್ದಾರೆ.

Contact Us for Advertisement

Leave a Reply