masthmagaa.com:

ಕೊರೋನಾ ಸೋಂಕು ತಗುಲಿದ್ದ 54 ವರ್ಷದ ಮಹಿಳೆಯಬ್ಬರು ಪಶ್ಚಿಮ ಬಂಗಾಳದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊರೋನಾ ವೈರಸ್​ಗೆ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಮಹಿಳೆಯು ಇತ್ತೀಚೆಗಷ್ಟೇ ಚೆನ್ನೈನಿಂದ ವಾಪಸ್ ಆಗಿದ್ದರು ಅನ್ನೋದು ತಿಳಿದುಬಂದಿದೆ.

ದೇಶದಲ್ಲಿ ಕೊರೋನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಜೊತೆಗೆ 1,171 ಜನರಲ್ಲಿ ಕಾಯಿಲೆ ದೃಢಪಟ್ಟಿದ್ದು 100 ಜನ ಸಂಪೂರ್ಣವಾಗಿ ಗುಣಮುಖರಾಗಿ ವಾಪಸ್ ಬಂದಿದ್ದಾರೆ.

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 200ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಮಹಾರಾಷ್ಟ್ರದಲ್ಲಿ 8 ಮಂದಿ ಮೃತಪಟ್ಟರೆ, ಗುಜರಾತ್​ನಲ್ಲಿ 5, ಕರ್ನಾಟಕದಲ್ಲಿ 3, ದೆಹಲಿ ಮತ್ತು ಜಮ್ಮು-ಕಾಶ್ಮೀರದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ.

-masthmagaa.com

Contact Us for Advertisement

Leave a Reply