masthmagaa.com:

ಭಾರಿ ಆತಂಕ ಸೃಷ್ಟಿಸಿದ್ದ ‘ನಿವಾರ್’ ಚಂಡಮಾರುತದ ಪ್ರಭಾವವೇನೋ ಕಡಿಮೆಯಾಗಿದೆ. ಆದ್ರೆ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗುವ ಲಕ್ಷಣ ಕಾಣ್ತಿದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್‌ 29ರ ವೇಳೆಗೆ ವಾಯುಭಾರ ಕುಸಿತ ಆಗುವ ನಿರೀಕ್ಷೆಯಿದ್ದು, ಡಿಸೆಂಬರ್‌ 2ರಂದು ಪುದುಚೆರಿ ಮತ್ತು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಡಿಸೆಂಬರ್ 1ರಿಂದ 3ರವರೆಗೆ ತಮಿಳುನಾಡು, ಪುದುಚೆರಿ ಮತ್ತು ಕಾರೈಕಲ್​ನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರ ಇಲ್ಲಿದೆ ನೋಡಿ.

-masthmagaa.com

Contact Us for Advertisement

Leave a Reply