ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರ ಸಾವು!

masthmagaa.com:

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ವಾಹನವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಂಡ್ಯದ ಮದ್ದೂರಿನ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಮಣಿ ಹಾಗೂ ಜನಾರ್ದನ ಪೂಜಾರಿ ಮೃತ ದುರ್ದೈವಿಗಳು. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂದ್ಹಾಗೆ ಇತ್ತೀಚೆಗೆ ಬೆಂಗಳೂರು-ಮೈಸೂರು ನಗರಗಳನ್ನು ಜೋಡಿಸುವ ಈ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply