ಜೂನ್‌ 15 ರಿಂದ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಪ್ರಾರಂಭ!

masthmagaa.com:

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1ರಂದು ಹಾಗೂ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್‌ 17-18ರಂದು ಚಾಲನೆ ನೀಡಲು ತಯಾರಿ ನಡೆಸಲಾಗ್ತಿದೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹಜ್ಯೋತಿ ಯೋಜನೆಗೆ ಆಗಸ್ಟ್‌ 1ರಂದು ಕಲಬುರಗಿಯಲ್ಲಿ ಚಾಲನೆ ನೀಡಲು ಯೋಚಿಸುತ್ತಿದ್ದೇವೆ. ಹಾಗೂ ಗೃಹಲಕ್ಷ್ಮೀ ಯೋಜನೆಯನ್ನ ಆಗಸ್ಟ್‌ 17 ಅಥ್ವಾ 18ರಂದು ಬೆಳಗಾವಿಯಲ್ಲಿ ಚಾಲನೆ ನೀಡಲು ಚರ್ಚಿಸಲಾಗಿದೆ. 2 ಯೋಜನೆಗಳ ಅರ್ಜಿ ಸಲ್ಲಿಕೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೂನ್‌ 15 ರಂದು ಪ್ರಾಂರಂಭವಾಗಲಿದೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನ ನಿವಾರಿಸಿ ನಾಗರಿಕರಿಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply