masthmagaa.com:

ಕೆಲ ದಿನಗಳ ಹಿಂದಷ್ಟೇ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯಾ ಅರ್ಜುನ್​ಗೂ ಕೊರೋನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿರೋ ಐಶ್ವರ್ಯಾ, ‘ಇತ್ತೀಚೆಗಷ್ಟೇ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯಕೀಯ ಸಿಬ್ಬಂದಿಯ ಸಲಹೆ ಮೇರೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಂಡು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲ ದಿನಗಳಿಂದ ಯಾರಾದರೂ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರೆ ದಯವಿಟ್ಟು ಹುಷಾರಾಗಿರಿ, ಸುರಕ್ಷಿತವಾಗಿರಿ. ದಯವಿಟ್ಟು ಮಾಸ್ಕ್ ಧರಿಸಿ’ ಅಂತ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ನಟ ಧ್ರುವ ಸರ್ಜಾ ಟ್ವೀಟ್ ಮಾಡಿ ತಮಗೆ ಮತ್ತು ಪತ್ನಿ ಪ್ರೇರಣಾಗೆ ಸೋಂಕು ತಗುಲಿರೋದನ್ನು ದೃಢಪಡಿಸಿದ್ದರು. ಅದಾದ ಬಳಿಕ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೋನಾ ಸೋಂಕು ದೃಢಪಟ್ಟಿತ್ತು. ನಾಲ್ವರು ಕೂಡ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

-masthmagaa.com

Contact Us for Advertisement

Leave a Reply