ಕಾಂಗ್ರೆಸ್‌ ನಾಯಕರನ್ನ ಭೇಟಿ ಮಾಡಲು ಮುಂದಾದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್!

masthmagaa.com:

ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಿರುದ್ಧ ಸಮರ ಸಾರಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವ್ರು ವಿರೋಧ ಪಕ್ಷಗಳ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವ್ರನ್ನ ಭೇಟಿ ಮಾಡಿ ಮಾತುಕತೆ ನಡೆಸಲು ಯೋಜಿಸುತ್ತಿದ್ದೇನೆ ಅಂತ ಹೇಳಿದ್ದಾರೆ. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪ್ರಜಾಸತ್ತಾತ್ಮಕವಲ್ಲದ ಮತ್ತು ಅಸಂವಿಧಾನಿಕ ಸುಗ್ರೀವಾಜ್ಞೆಯ ವಿರುದ್ಧ ಸಂಸತ್ತಿನಲ್ಲಿ ಕಾಂಗ್ರೆಸ್ ಬೆಂಬಲ ಪಡೆಯಲು ಕಾಂಗ್ರೆಸ್‌ ನಾಯಕರ ಬಳಿ ಚರ್ಚಿಸಲಿದ್ದೇನೆ ಅಂತ ಕೇಜ್ರಿವಾಲ್‌ ತಿಳಿಸಿದ್ದಾರೆ. ಇನ್ನೊಂದ್‌ ಕಡೆ ಮುಂಬರುವ ನೀತಿ ಆಯೋಗದ ಸಭೆಯನ್ನ ಬಹಿಷ್ಕರಿಸಿರುವ ಕೇಜ್ರಿವಾಲ್‌, ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿಯವರೇ ಸುಪ್ರೀಂಕೋರ್ಟ್‌ಗೆ ಬದ್ಧವಾಗಿಲ್ಲ ಅಂದ್ರೆ ಜನರು ನ್ಯಾಯಕ್ಕಾಗಿ ಎಲ್ಲಿಗೆ ಹೋಗ್ಬೇಕು ಅಂತ ಜನ ಕೇಳ್ತಿದ್ದಾರೆ. ಇನ್ನು ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸಹಕಾರ ಒಂದು ರೀತಿಯಲ್ಲಿ ಜೋಕ್‌ ಆಗಿರುವಾಗ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸೋದ್ರಲ್ಲಿ ಏನು ಪ್ರಯೋಜನವಿಲ್ಲ ಅಂತ ಕೇಜ್ರಿವಾಲ್‌ ಪತ್ರದಲ್ಲಿ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply