masthmagaa.com:

ಕಳೆದ ಹಲವು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರುವ ದೆಹಲಿಯಲ್ಲಿ ಸಣ್ಣ ಪ್ರಮಾಣದಲ್ಲಿ ಲಾಕ್​ಡೌನ್ ರೀತಿಯ ನಿರ್ಬಂಧಗಳು ಜಾರಿಗೆ ಬರುವ ಲಕ್ಷಣ ಕಾಣ್ತಿದೆ. ಕೊರೋನಾ ನಿಯಮಗಳನ್ನ ಪಾಲಿಸದೇ ಸೋಂಕಿನ ಹಾಟ್​ಸ್ಪಾಟ್​ ರೀತಿ ಆಗಿರುವ ಕೆಲವೊಂದು ಮಾರುಕಟ್ಟೆಗಳನ್ನ ಬಂದ್ ಮಾಡಲು ದೆಹಲಿ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಇಷ್ಟೇ ಅಲ್ಲ ಕೊರೋನಾ ಹಾವಳಿ ಕಮ್ಮಿ ಇದ್ದಾಗ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು 200 ಜನರಿಗೆ ಅವಕಾಶ ನೀಡಲಾಗಿತ್ತು. ಅದನ್ನೀಗ 50 ಜನರಿಗೆ ಇಳಿಸಲಾಗಿದೆ. ಹೀಗೆ ಕೊರೋನಾ ನಿಯಂತ್ರಿಸಲು ದೆಹಲಿಯಲ್ಲಿ ಸಣ್ಣ ಪ್ರಮಾಣದ ನಿರ್ಬಂಧಕ ಕ್ರಮಗಳು ಮತ್ತೆ ಜಾರಿಗೆ ಬರುವ ಲಕ್ಷಣ ಗೋಚರಿಸುತ್ತಿದೆ. ಆದ್ರೆ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಸಂಪೂರ್ಣ ಲಾಕ್​ಡೌನ್ ಜಾರಿಗೆ ತರಲ್ಲ ಅಂತ ಸರ್ಕಾರ ಸ್ಪಷ್ಟಪಡಿಸಿದೆ.

-masthmagaa.com

Contact Us for Advertisement

Leave a Reply