ಬಾಂಗ್ಲಾದೇಶದಲ್ಲಿ ಮತ್ತೊಂದು ದೇಗುಲ ಧ್ವಂಸ!

masthmagaa.com:

ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ಮಂದಿರವನ್ನು ಧ್ವಂಸಗೊಳಿಸಲಾಗಿದೆ. ಢಾಕಾದಿಂದ 157 ಕಿಲೋಮೀಟರ್ ದೂರದಲ್ಲಿರೋ ಫೆನಿಯಲ್ಲಿ ಹಿಂದೂ ದೇಗುಲ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಜೊತೆಗೆ ದರೋಡೆ ಕೂಡ ನಡೆಸಲಾಗಿದೆ. ಗಲಾಟೆಯಲ್ಲಿ 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬುಧವಾರ ದುರ್ಗಾ ಮಾತೆಯ ಕಾಲಿನ ಬಳಿ ಅನ್ಯಕೋಮಿನ ಧರ್ಮಗ್ರಂಥ ಇಟ್ಟಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಅಲ್ಲಿ ಹಿಂಸಾಚಾರ ಶುರುವಾಗಿದೆ. ಹಲವು ದೇವಸ್ಥಾನಗಳನ್ನು ಧ್ವಂಸಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ಹೊಸ ಗಲಾಟೆ ನಡೆದಿದೆ. ಇನ್ನು ಅಲ್ಪಸಂಖ್ಯಾತ ಸಮುದಾಯ ಈ ಘಟನೆಗಳನ್ನು ಖಂಡಿಸಿ ದೇಶದಾದ್ಯಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ.

-masthmagaa.com

Contact Us for Advertisement

Leave a Reply