ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಬಿಜೆಪಿ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮಾಸಿಕ ಗೌರವ ಧನ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈವರೆಗೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 6 ಸಾವಿರ ರೂಪಾಯಿ ಗೌರವ ಧನ ನೀಡಲಾಗುತ್ತಿತ್ತು. ಈಗ 500 ರೂಪಾಯಿ ಹೆಚ್ಚಿಸಿ, ಪ್ರತಿ ತಿಂಗಳು ಆರೂವರೆ ಸಾವಿರ ರೂಪಾಯಿ ಗೌರವ ಧನ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 25 ಕೋಟಿ ರೂಪಾಯಿ ಹೊರೆಯಾಗಲಿದೆ. ರಾಜ್ಯದ ಸುಮಾರು 35 ಸಾವಿರ ಆಶಾ ಕಾರ್ಯಕರ್ತೆಯರಿಗೆ ಇದ್ರ ಲಾಭ ಸಿಗಲಿದ್ದು, ನವೆಂಬರ್ 1ರಿಂದಲೇ ಅನ್ವಯವಾಗಲಿದೆ. ಸಚಿವ ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇನ್ನು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ 20 ಮಂದಿ ಶಿಕ್ಷಾರ್ಹ ಕೈದಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ.

Contact Us for Advertisement

Leave a Reply