ಮಾಜಿ ಪಿಎಂ ಅಟಲ್‌ ಬಿಹಾರಿ ವಾಜಪೇಯಿ ಅವ್ರಿಗೆ ನಮನ ಸಲ್ಲಿಸಿದ ಪಿಎಂ ಮೋದಿ!

masthmagaa.com:

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ವಾಜಪೇಯಿ ಸ್ಮಾರಕ ‘ಸದೈವ್‌’ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, ಅಟಲ್‌ಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ‘ಸದೈವ್‌ ಅಟಲ್‌’ಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದೆ. ದೇಶ ಸೇವೆ ವಿಚಾರದಲ್ಲಿ ಅಟಲ್‌ಜಿ ನಮಗೆಲ್ಲಾ ಸ್ಫೂರ್ತಿಯಾಗಿದ್ದು, ಅವರು ಭಾರತದ ಪರಿವರ್ತನೆಗೆ ಶ್ರಮಿಸಿದ ಪ್ರವರ್ತಕ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply