masthmagaa.com: 2014 ರಲ್ಲಿ ತೆರೆಕಂಡಿದ್ದ “ದೃಶ್ಯ” ಚಿತ್ರದ ಮುಂದುವರಿದ ಭಾಗ “ದೃಶ್ಯ 2”. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಬಿಡುಗಡೆ ಮಾಡಿದರು.ಈ ಸಮಾರಂಭಕ್ಕೆ ಬಂದಿದ್ದು, ನನಗೆ ಖುಷಿಯಾಗಿದೆ. ರವಿ ಅಣ್ಣ ನನ್ನನ್ನು, ನಮ್ಮ ಕುಟುಂಬದವನು ಎಂದದ್ದು ಇನ್ನೂ ಸಂತೋಷ ತಂದಿದೆ. ಈ ಚಿತ್ರ ಮಲೆಯಾಳಂ, ತೆಲುಗು ಭಾಷೆಯಲ್ಲಿ ಬಂದಿದೆ ಅಂದರು. ಆದರೆ ನಾನು‌ ಯಾವ ಭಾಷೆಯಲ್ಲೂ ಈ ಸಿನಿಮಾ ನೋಡಿಲ್ಲ‌. ಹಾಗಾಗಿ ನನಗೆ ಕಥೆ ಗೊತ್ತಿಲ್ಲ. ನನ್ನ ಹೆಂಡತಿ ಮಲೆಯಾಳಿ. ಅವರು ಮಲೆಯಾಳಂ ಚಿತ್ರ ನೋಡುವಾಗ ನನಗೂ ತೋರಿಸುತ್ತಾರೆ. ನಾನು ಸಬ್ ಟೈಟಲ್ ನೋಡುತ್ತಿರುತ್ತೇನೆ. ಒಳ್ಳೆಯ ಕಲಾವಿದರು ಹಾಗೂ ಒಳ್ಳೆಯ ತಂತ್ರಜ್ಞರು ಸೇರಿ ಮಾಡಿದಾಗ ಅದು ಒಳ್ಳೆಯ ಸಿನಿಮಾನೇ ಆಗಿರುತ್ತದೆ. ದೃಶ್ಯ ಚಿತ್ರವನ್ನು ಕನ್ನಡದಲ್ಲೇ ನೋಡಿದ್ದೀನಿ. ಎರಡನೇ ಭಾಗವನ್ನು ಕನ್ನಡದಲ್ಲೇ ನೋಡುತ್ತೇನೆ. ನೀವು ಮೂರನೇ ಭಾಗ ಮಾಡುವುದಿದ್ದರೆ ಮೊದಲು ಕನ್ನಡದಲ್ಲೇ ಮಾಡಿ ಎಂದು ಸುದೀಪ್ ಸಲಹೆ ನೀಡಿದರು. ದೃಶ್ಯ ಮೊದಲ ಭಾಗದ ಸಿನಿಮಾ ಮಾತುಕತೆ ಆರಂಭವಾಗಿದ್ದು, ನಮ್ಮ ಮಾಣಿಕ್ಯRead More →

masthmagaa.com: ಸಿ.ಆರ್.ಮನೋಹರ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ, ಇಶಾನ್ ಹಾಗೂ ಆಶಿಕಾ ರಂಗನಾಥ್ ಜೋಡಿಯ “ರೇಮೊ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.ಕರ್ನಾಟಕ ಚಲನಚಿತ್ರ ವಾಣಿಜ್ಯ‌ ಮಂಡಳಿ ಅಧ್ಯಕ್ಷ ಜೈರಾಜ್, ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ನಿರ್ಮಾಪಕರಾದ ಕೆ.ಮಂಜು, ಎಂ.ಜಿ.ರಾಮಮೂರ್ತಿ, ಉಮಾಪತಿ ಶ್ರೀನಿವಾಸ್ ಗೌಡ, ಉಮೇಶ್ ಬಣಕಾರ್, ಎ.ಗಣೇಶ್ , ಎಂ.ಎನ್ ಸುರೇಶ್, ಆನಂದ್ ಆಡಿಯೋ ಶ್ಯಾಮ್, ನಿರ್ದೇಶಕರಾದ ಯೋಗರಾಜ್ ಭಟ್, ಹರ್ಷ, ನಾಗಣ್ಣ, ವಿಜಯ್ ಕುಮಾರ್ ಕೊಂಡ ಹಾಗೂ ಉದ್ಯಮಿ ಸಿ.ಜೆ ರಾಯ್ ಸೇರಿದಂತೆ ಅನೇಕ ಗಣ್ಯರು ಟೀಸರ್ ಬಿಡುಗಡೆಗೆ ಆಗಮಿಸಿ ಶುಭ‌ ಕೋರಿದರು. ನಮ್ಮದು ತುಂಬು ಕುಟುಂಬ.‌ ಇಶಾನ್ ನನ್ನ ತಮ್ಮ(ಚಿಕ್ಕಪ್ಪನ ಮಗ). ನಮ್ಮ ಮನೆಗೆ ಬಂದವರೆಲ್ಲಾ ಇಶಾನನ್ನು ಹೀರೋ ಮಾಡಿ ಎನ್ನುತ್ತಿದ್ದರು. “ರೋಗ್” ಚಿತ್ರದ ಮೂಲಕ ಇಶಾನ್ ಹೋರೋ ಆದ. ನಂತರ ಪವನ್ ಒಡೆಯರ್ ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ನಾನು ಸಿನಿಮಾ ನೋಡಿದ್ದೀನಿ. ಚೆನ್ನಾಗಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದRead More →

masthmagaa.com: ಇಂದು ಬೆಳಿಗ್ಗೆ ಮಲ್ಲೇಶ್ವರಮ್ ನ ಬಂಡೆಗಣೇಶ ದೇವಸ್ಥಾನದಲ್ಲಿ ಶಿವಾಜಿ ಸುರತ್ಕಲ್ 2 ಸಿನಿಮಾದ ಮುಹೂರ್ತ ಸರಳವಾಗಿ ನೆರವೇರಿದ್ದು, ಪ್ರಮುಖ ತಾರಾಗಣ, ತಂತ್ರಜ್ಞರ ತಂಡ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಇನ್ನು ಚಿತ್ರದ ತಾರಾಗಣದಲ್ಲಿ ಮಗಳು ಜಾನಕಿ ಧಾರಾವಾಹಿಯ ಮೂಲಕ ಮನೆ ಮಾತಾಗಿರುವ ರಾಕೇಶ್ ಮಯ್ಯ ಶಿವಾಜಿ ಸುರತ್ಕಲ್-2 ಚಿತ್ರದ ತಾರಾಬಳಗಕ್ಕೆ ಹೊಸ ಎಂಟ್ರಿ. ಜಸ್ಟ್ ಟ್ರೇನಿಂಗ್ ಮುಗಿಸಿ ಕೆಲಸಕ್ಕೆ ಸೇರಿರುವ ಪೋಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ, ಈ ಪಾತ್ರಕ್ಕೆ ಹಲವು ಶೇಡ್’ಗಳಿದ್ದು ಚಿತ್ರದುದ್ದಕ್ಕು ಪ್ರಾಮುಖ್ಯತೆ ವಹಿಸುವ ಪಾತ್ರವಾಗಿದೆ. ಈ ತಂಡಕ್ಕೆ ಮತ್ತೊಂದು ಆಗಮನ, ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು ತಮ್ಮದೇ ಆದ ಶೈಲಿಯಿಂದ ಗುರುತಿಸಿಕೊಂಡಿರುವಂತಹ ಬಿಗ್ ಬಾಸ್ ಖ್ಯಾತಿಯ ವಿನಾಯಕ ಜೋಷಿ. ಈ ಚಿತ್ರದಲ್ಲಿ ಇವರದ್ದು ರಫ್ ಅ್ಯಂಡ್ ಟಫ್ ಪೋಲೀಸ್ ಅಧಿಕಾರಿ ಪಾತ್ರವಾಗಿದ್ದು ಚಿತ್ರದ ಕಥೆಗೆ ಮಹತ್ವದ ತಿರುವು ನೀಡುತ್ತದೆ. ಇನ್ನು ಉದಯೋನ್ಮುಖ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ನಕುಲ್ ಅಭ್ಯಂಕರ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮತ್ತು ಹಿನ್ನೆಲೆ ಸಂಗೀತದ ಜವಾಬ್ದಾರಿ ಹೊತ್ತಿದ್ದಾರೆ. ನಕುಲ್ ಅಭ್ಯಂಕರ್Read More →

masthmagaa.com: ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನ ನೀಡಿ ಪೊಲೀಸ್ ಕೇಸ್ ಮಾಡಿಕೊಂಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಈಗಾಗಲೇ ಎರಡು ಬಾರಿ ಪೊಲೀಸ್ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಂಡಿದ್ದಾರೆ. ಆದರೆ ಇಂದು ಬಸವನಗುಡಿಯ ಪೊಲೀಸ್ ಠಾಣೆಯಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಹಂಸಲೇಖ ಪಾಲ್ಗೊಳ್ಳಬಹುದು ಎಂಬ ನಿರೀಕ್ಷೆ ಇದೆ. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸ್ವಘೋಷಿತ ವಾಕ್ಸ್ವಾತಂತ್ರ್ಯಪರ ಹೊರಾಟಗಾರ ಮತ್ತು ನಟ ಚೇತನ್ ಅಹಿಂಸ “ಇವತ್ತು ಬಸವನಗುಡಿಯ ಪೊಲೀಸ್ ಠಾಣೆಯಲ್ಲಿ ನಡೆಯಲಿರುವ ಹಂಸಲೇಖ ಸರ್ ಅವರ ವಿಚಾರಣೆ ಸಮಯದಲ್ಲಿ ನಾನು ಅವರೊಂದಿಗೆ ಠಾಣೆಯಲ್ಲಿ ಒಗ್ಗಟ್ಟಿನಲ್ಲಿ ನಿಲ್ಲುತ್ತೇನೆ. ನೆನಪಿರಲಿ: ಇದು ವಾಕ್ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಹೊರಾಟವಾಗಿದ್ದು, ಸಂವಿಧಾನದ ವಿರೋಧಿಗಳು ಮತ್ತು ಬ್ರಾಹ್ಮಣ್ಯದ ಶಕ್ತಿಗಳು ಇವನ್ನು ಅಪರಾಧೀಕರಿಸುತ್ತಿದ್ದಾರೆ. ನಿಮ್ಮನ್ನೆಲ್ಲ ಅಲ್ಲಿ ಭೇಟಿ ಆಗುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಪ್ರಗತಿಪರ ಚಿಂತಕಿ ಅರುಂದತಿ ರಾಯ್ ಅವರ ಮಾತುಗಳಲ್ಲಿ ಎಷ್ಟು ಸತ್ಯ ಇದೆ ತಮ್ಮ ಬರಹದ ಕೊನೆಯಲ್ಲಿ ಹೇಳಿದ್ದಾರೆ. ಚೇತನ್ ಅಹಿಂಸಾ ಹೇಳಿಕೆಗೆ ಬಜರಂಗದಳದ ಸದಸ್ಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. -masthmagaa.com ShareRead More →

masthmagaa.com: ಅಮೀರ್‌ ಖಾನ್ ಸಿನಿಮಾಗೆ ಭಾರತ ಸೇರಿ, ವಿಶ್ವದಾದ್ಯಂತ ಪ್ರೇಕ್ಷಕರು ಕಾಯ್ತಾ ಇರ್ತಾರೆ . ಬಾಲಿವುಡ್‌ನ ಪರ್ಫೆಕ್ಷನಿಸ್ಟ್ ಅಂತಲೇ ಹೆಸರಾದ ಅಮೀರ್‌ ಖಾನ್ ಈಗ  ನಮ್ಮ ರಾಕಿಂಗ್‌ ಬಾಯ್‌ಗೆ ಸಲಾಂ ಅಂದಿದ್ದಾರೆ. ನಾನೂ ಕೂಡ ಯಶ್‌ ಅವರ ಅಭಿಮಾನಿ. ಯಶ್ ಅವರ ಕೆಜಿಎಫ್‌ 2 ಸಿನಿಮಾವನ್ನು ಮೊದಲ ದಿನವೇ ನೋಡ್ತೀನಿ, ಅದೇ ಥರ ಸಿನಿಮಾಕ್ಕೆ ಪ್ರಚಾರವನ್ನೂ ಕೊಡ್ತೀನಿ ಅಂತ ಅಮೀರ್‌ ಹೇಳಿದ್ದಾರೆ. ಇಷ್ಟು ಮಾತ್ರ ಅಲ್ಲ, ಅಮೀರ್‌ಖಾನ್‌ ಈ ವಿಚಾರವನ್ನು ಯಶ್‌ ಅವರ ಬಳಿಯೂ ಹೇಳಿದ್ದಾರೆ. ಸುಮಾರು ಹೊತ್ತು ಯಶ್‌ ಜೊತೆಗೆ ಈ ಬಗ್ಗೆ ಮಾತಾಡಿದ್ದಾರಂತೆ.  ಕೆಜಿಎಫ್‌ 2 ಬಿಡುಗಡೆಯಾಗುವ ದಿನವೇ ಅಮೀರ್‌ ಖಾನ್‌ ನಟನೆಯ ‘ಲಾಲ್‌ಸಿಂಗ್‌ ಛಡ್ಡಾ’ ಚಿತ್ರಕೂಡ ಬಿಡುಗಡೆ ಆಗ್ತಾ ಇದೆ. ಇದೇ ವಿಚಾರಕ್ಕೆ ಅಮೀರ್‌ ಖಾನ್‌ಗೆ ಕೊಂಚ ಗೊಂದಲ ಶುರುವಾದಂತಿದೆ. ಹೀಗಾಗಿಯೇ ಅವರು ಕೆಜಿಎಫ್‌ 2 ಬಿಡುಗಡೆ ದಿನಾಂಕ ಮುಂದೂಡಲು ಸಾಧ್ಯವೇ ಎಂದು ಚಿತ್ರತಂಡದ ಜೊತೆಗೆ ಚರ್ಚೆ ಮಾಡಿದ್ದಾರೆ ಎಂಬ ವದಂತಿ ಹರಿದಾಡುತ್ತಾ ಇದೆ. ಜೊತೆಗೆ ಅದೇ ದಿನ ತನ್ನ ಸಿನಿಮಾ ಯಾಕೆ ರಿಲೀಸ್‌Read More →

masthmagaa.com: ಕಲಾದೇಗುಲ ಫಿಲಂಸ್​ ಬ್ಯಾನರ್​ನಲ್ಲಿ ಸಿದ್ಧವಾಗಿರುವ ಅಕ್ಷಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರ ಇದೇ ಡಿ. 3ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿದ್ದು, ಈ ವಿಚಾರವನ್ನು ಹೇಳಿಕೊಳ್ಳಲೆಂದು ಇಡೀ ತಂಡ ಮಾಧ್ಯಮದ ಮುಂದೆ ಬಂದಿತ್ತು. ಅಷ್ಟೇ ಅಲ್ಲ. ಪಿಆರ್​ಕೆ ಸಂಸ್ಥೆಯೂ ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿತ್ತು. ಆ ವಿಚಾರವನ್ನು ತಂಡ ನೆನಪು ಮಾಡಿಕೊಂಡಿತು. ಪುನೀತ್ ಭಾವಚಿತ್ರಕ್ಕೆ ನಮಸುವ ಮೂಲಕ ಮಾತುಕತೆ ಆರಂಭವಾಯಿತು. ಮೊದಲಿಗೆ ಕಲಾದೇಗುಲ ಶ್ರೇನಿವಾಸ್ ಮಾತನಾಡಿ, ”ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿ ನಾವು ಅಪ್ಪು ಅವರನ್ನು ಭೇಟಿಯಾಗಿದ್ದೆವು, ನಾನು ಸಿನಿಮಾ ನೋಡಬೇಕು ಎಂದು ಅಪ್ಪು ಅವರು ಆಸೆ ಪಟ್ಟರು. ಅಂತೆಯೇ ನಾವು ಅವರಿಗೆ ಖಾಸಗಿ ಲಿಂಕ್ ಒಂದನ್ನು ನೀಡಿದೆವು. ಆದರೆ ಅವರು ಸಿನಿಮಾ ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನನ್ನ ಮನಸ್ಸು ಹೇಳುತ್ತಿದೆ ಅವರು ಸಿನಿಮಾ ನೋಡಿದ್ದಾರೆಂದು. ಒಂದೊಮ್ಮೆ ಅವರು ನೋಡಿಲ್ಲವಾದರೆ ಅವರು ದಾನ ಮಾಡಿರುವ ಕಣ್ಣುಗಳಾದರೂ ‘ಅಕ್ಷಿ’ ಸಿನಿಮಾವನ್ನು ನೋಡುತ್ತವೆ” ಎಂದು ಸುದ್ದಿಗೋಷ್ಠಿಯಲ್ಲಿ ಭಾವುಕರಾದರು ಕಲಾದೇಗುಲ ಶ್ರೀನಿವಾಸ್. ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ, ಈ ಕಥೆ ಹುಟ್ಟಿದ್ದಕ್ಕೆRead More →

masthmagaa.com: ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿರುವ “ದಿಲ್ ಪಸಂದ್” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ ಅಪಾರ ಜನಮನ್ನಣೆ ದೊರಕಿದೆ.‌ ಶಿವತೇಜಸ್ ನಿರ್ದೇಶನದ ಈ‌ ಚಿತ್ರದ ನಾಯಕರಾಗಿ ‌ಡಾರ್ಲಿಂಗ್ ಕೃಷ್ಣ ಅಭಿನಯಿಸಿಸುತ್ತಿದ್ದಾರೆ. ನಿಶ್ವಿಕನಾಯ್ಡು‌ ಹಾಗೂ ಮೇಘ ಶೆಟ್ಟಿ “ದಿಲ್ ಪಸಂದ್”ನ ನಾಯಕಿಯರು. ಸಾಧುಕೋಕಿಲ,‌‌ ರಂಗಾಯಣ ರಘು, ತಬಲ‌ ನಾಣಿ, ಅರುಣ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗಾಗಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್ ಮೊದಲವಾರದಲ್ಲಿ ದ್ವಿತೀಯ ಹಂತದ ‌ಚಿತ್ರೀಕರಣ‌ ಆರಂಭವಾಗಲಿದೆ. ಅರ್ಜುನ್ ಜನ್ಯರ ಸಂಗೀತ ನಿರ್ದೇಶನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸ ನಿರ್ದೇಶನ “ದಿಲ್ ಪಸಂದ್” ಚಿತ್ರಕ್ಕಿದೆ. -masthmagaa.com Share on: WhatsAppContact Us for AdvertisementRead More →

masthmagaa.com: ಪುಷ್ಕರ್ ಫಿಲಂಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನ್ ನಿರ್ಮಿಸಿರುವ “ಅವತಾರ ಪುರುಷ” ಚಿತ್ರ ಇದೇ ಡಿಸೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ನಾನು ಈವರೆಗೂ ಈ ರೀತಿಯ ಚಿತ್ರ ಮಾಡಿಲ್ಲ.. ನನ್ನ ಈವರೆಗಿನ ಸಿನಿಪಯಣದಲ್ಲೇ ದೊಡ್ಡ ಬಜೆಟ್ ನ‌ ಚಿತ್ರವಿದು. ಇಂತಹ ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಪುಷ್ಕರ್ ಅವರ ಧೈರ್ಯ ಮೆಚ್ಚಲೇಬೇಕು. ಇನ್ನೂ ನಿರ್ದೇಶಕ‌ ಸಿಂಪಲ್ ಸುನಿ‌, ಅವರ ಹೆಸರಿನಲ್ಲ ಮಾತ್ರ ಸಿಂಪಲ್ ಇಲ್ಲ. ಸಿಂಪಲೆಸ್ಟ್ ಸುನಿ ಅವರು. ಅವರ ಕಾರ್ಯವೈಖರಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಇನ್ನೂ ನಾಯಕಿ ಆಶಿಕಾ ರಂಗನಾಥ್ ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ‌ ಸೊಗಸಾಗಿ ‌ಮೂಡಿಬಂದಿದೆ. ನಾನು ಸುಮಾರು ಹತ್ತು ಅವತಾರಗಳಲ್ಲಿ ಕಾಣಿಸಬಹುದು. ಇದೇ ಡಿಸೆಂಬರ್ ಹತ್ತರಂದು “ಅವತಾರ ಪುರುಷ” ನ ಆಗಮನವಾಗಲಿದೆ ನೋಡಿ ಹಾರೈಸಿ ಎಂದರು ನಾಯಕ ಶರಣ್. ಎಲ್ಲರೊಡನೆ ಉತ್ತಮ ಬಾಂಧವ್ಯ ಬೆಸೆದ ಸಿನಿಮಾ “ಅವತಾರ ಪುರುಷ”. ಈ ತಂಡದಲ್ಲಿ ಎಲ್ಲರೂ ಒಂದೇ ಕುಟುಂಬದವರ ಹಾಗೆ ಇದ್ದೆವು. ಶರಣ್ ಹಾಗೂ ಸುನಿ ಅವರ ಕಾಂಬಿನೇಶನಲ್ಲಿ ಈRead More →

masthmagaa.com: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲ ಆಗಲಿ 20ಕ್ಕೂ ಹೆಚ್ಚು ದಿನಗಳು ಕಳೆದಿವೆ. ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ಅಷ್ಟೇ ಅಲ್ಲದೇ ಇಡೀ ಕರ್ನಾಟಕ ಜನತೆಗೆ ತುಂಬಲಾರದ ನಷ್ಟ! ಈ ಸಂದರ್ಭದಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ಸ್ವತಃ ಪ್ರಧಾನಿ ಮೋದಿ ಬಿಜೆಪಿ ಪಕ್ಷ ಸೇರಿಕೊಳ್ಳುವಂತೆ ಆಹ್ವಾನ ನೀಡಿದ್ದರು. ಆದರೆ ಅವರ ಆಹ್ವಾನವನ್ನ ಪುನೀತ್ ರಾಜ್ಕುಮಾರ್ ನಯವಾಗಿಯೇ ನಿರಾಕರಿಸಿದ್ದರು ಎಂಬ ವಿಷಯ ಬಹಿರಂಗ ಆಗಿದೆ. ಹೀಗಂತ ಹೇಳಿದ್ದು ಬೇರೆ ಯಾರೂ ಅಲ್ಲ ಪುನೀತ್ ಆಪ್ತ, ಮತ್ತು ಅವರ ಪ್ರೊಡಕ್ಷನ್ ಮ್ಯಾನೇಜರ್ ಎನ್.ಎಸ್. ರಾಜ್‌ಕುಮಾರ್. ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಎನ್. ಎಸ್ ರಾಜಕುಮಾರ್ ಪುನೀತ್‌ರನ್ನ ರಾಜಕೀಯಕ್ಕೆ ಕರೆತರಲು ಬಿಜೆಪಿ ನಾಯಕರು ತುಂಬಾ ಪ್ರಯತ್ನ ಪಟ್ಟಿದ್ದರು, ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಚಿತ್ರನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್ ಮತ್ತು ನಿರ್ಮಾಪಕ ಎಸ್.ವಿ. ಬಾಬು ಅವರು ಪುನೀತ್ ಅವರನ್ನು ಭೇಟಿ ಮಾಡಿ, ರಾಜಕೀಯಕ್ಕೆ ಬರುವಂತೆ ಕೋರಿದ್ದರು. ಆಗRead More →

masthmagaa.com: ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಸಖತ್ ನ.26ಕ್ಕೆ ಅದ್ಧೂರಿಯಾಗಿ ತೆರೆಗೆ ಬರೋದಿಕ್ಕೆ ರೆಡಿಯಾಗಿದೆ. ಫಸ್ಟ್ ಲುಕ್, ಟೀಸರ್ ಹಾಗೂ ಸಾಂಗ್ಸ್ ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಸಖತ್ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಗೋಲ್ಡನ್ ಸ್ಟಾರ್ ಗಣೇಶ್, ನಿರ್ದೇಶಕ ಸಿಂಪಲ್ ಸುನಿ, ನಾಯಕಿಯರಾದ ನಿಶ್ವಿಕಾ ನಾಯ್ಡು, ಸುರಭಿ, ನಿರ್ಮಾಪಕರಾದ ಸುಪ್ರಿತ್-ನಿಶಾ, ಹಿರಿಯ ಕಲಾವಿದರ ರಂಗಾಯಣ ರಘು ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ತಾರಾಬಳಗ ಸಖತ್ ಪ್ರೀ-ರಿಲೀಸ್ ಇವೆಂಟ್ ಗೆ ಸಾಕ್ಷಿಯಾದರು. ನಿರ್ದೇಶಕ ಕಂ ನಟ ಜೋಗಿ ಪ್ರೇಮ್, ಬೈ ಟು ಲವ್ ಬ್ಯೂಟಿ ಶ್ರೀಲೀಲಾ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಖತ್ ಸಿನಿಮಾಗೆ ಶುಭ ಹಾರೈಸಿದರು. ಗಣೇಶ್ ಪ್ರೇಮ್ ಒಟ್ಟಿಗೆ ವೇದಿಕೆ ಏರಿದರು. ಈ ವೇಳೆ ಗಣೇಶ್ ಪ್ರೇಮ್ ಗೆ ಒಂದು ಮನವಿ ಮಾಡಿಕೊಂಡರು. ಎಕ್ಸ್ ಕ್ಯೂಸ್ ಮೀ ಸಿನಿಮಾದ ಬ್ರಹ್ಮ ವಿಷ್ಣು ಹಾಡು ಹೇಳುವಂತೆ ಕೋರಿಕೊಂಡರು. ಅದಕ್ಕೆ ಅಕ್ಕರೆಯಿಂದ ಪ್ರತಿಕ್ರಿಯಿಸಿದRead More →