ಆಪರೇಷನ್ ಹಸ್ತ: ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್‌ ಸೇರ್ಪಡೆ

masthmagaa.com:

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ‘ಆಪರೇಷನ್ ಹಸ್ತ’ ಶುರುವಾಗಿದೆ. ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಬೈರತಿ ಬಸವರಾಜ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಪಕ್ಷ ಸೇರಿದ್ದಾರೆ. ಅಂದ್ಹಾಗೆ ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ರು.

-masthmagaa.com

Contact Us for Advertisement

Leave a Reply