ನವೆಂಬರ್‌ 15ರಂದು ರಾಜ್ಯಾಧ್ಯಕ್ಷ ಅಧಿಕಾರ ಸ್ವೀಕಾರ: ವಿಜಯೇಂದ್ರ

masthmagaa.com:

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನವೆಂಬರ್‌ 15ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು. ಮರುದಿನ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಅಂತ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಮಾತಾಡಿದ್ದು, ನಾನು ವಿಜಯೇಂದ್ರ ಅನ್ನೋದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಅಂತ ವಿಜಯೇಂದ್ರ ಹೇಳಿದ್ದಾರೆ. ಇತ್ತ ವಿಜಯೇಂದ್ರರನ್ನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರೋದನ್ನ ನಾನು ಹರ್ಷದಿಂದ ಸ್ವಾಗತ‌ ಮಾಡುತ್ತೇನೆ. ಬಿವೈ ವಿಜಯೇಂದ್ರ ಮೂರು ವರ್ಷ ಮಾತ್ರ ಅಧ್ಯಕ್ಷರಾಗಿರುತ್ತಾರೆ. ನಂತರ ಮತ್ತೊಬ್ಬ ಕಾರ್ಯಕರ್ತ ಅಧ್ಯಕ್ಷರಾಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಬಾಂಬ್ ಸಿಡಿಸಿದ್ದಾರೆ

-masthmagaa.com

Contact Us for Advertisement

Leave a Reply