ಸರ್ಕಾರ ಬದಲು, ರೂಲ್ಸು ಬದಲು! ಹಿಜಬ್‌ ರಿಟರ್ನ್ಸ್‌!

masthmagaa.com:

ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಬ್‌ ವಿವಾದ ಮತ್ತೆ ಸದ್ದು ಮಾಡ್ತಿದೆ. ಕಳೆದ ವರ್ಷ ಹಿಜಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವ ವಿಚಾರ ಕೋಮು ಸಂಘರ್ಷಕ್ಕೆ ಕಾರಣವಾಗಿ ರಾಜ್ಯಾದ್ಯಂತ ಗಲಭೆಗೆ ಕಾರಣವಾಗಿತ್ತು. ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಅಂತ KEA ತಿಳಿಸಿದೆ. ಜೊತೆಗೆ ಕಂಡೀಶನ್‌ಗಳನ್ನ ಹಾಕಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಅಂತ ತಿಳಿಸಿದೆ. KEA ನಿರ್ಧಾರಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶಗೊಂಡಿವೆ. ಹಿಜಬ್‌ಗೆ ಕೊಟ್ಟಿರುವ ಅನುಮತಿ ವಾಪಾಸ್ ಪಡೆಯಬೇಕು. ಇಲ್ಲವಾದರೆ ಪ್ರತಿಭಟನೆ ಹಾದಿ ಹಿಡಿಯುತ್ತೇವೆ ಅಂತ ಹಿಂದೂಪರ ಸಂಘಟನೆಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ.

 

-masthmagaa.com

Contact Us for Advertisement

Leave a Reply