ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ: ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ

masthmagaa.com:

ತಮಿಳುನಾಡಿನ ಚೆನ್ನೈನಲ್ಲಿ ನಡೆದ 7ನೇ ಆವತ್ತಿಯ ಏಷ್ಯನ್‌ ಹಾಕಿ ಚಾಂಪಿಯನ್‌ಷಿಪ್‌ ಟೂರ್ನಿಯನ್ನ ಹರ್ಮನ್​ಪ್ರೀತ್​ ಸಿಂಗ್ ನೇತೃತ್ವದ ಭಾರತ ತಂಡ ಗೆದ್ದು ಬೀಗಿದೆ. ಮಲೇಷ್ಯಾ ವಿರುದ್ಧದ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಆತಿಥೇಯ ಭಾರತ ತಂಡ 4-3 ಗೋಲುಗಳಿಂದ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ 4ನೇ ಬಾರಿಗೆ ಪ್ರಶಸ್ತಿ ಜಯಿಸಿದ ಭಾರತ ತಂಡ, ಮುಂಬರುವ ಏಷ್ಯನ್​ ಗೇಮ್ಸ್​ಗೆ ಮುನ್ನ ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ. ಇನ್ನು ಏಷ್ಯಾ ಚಾಂಪಿಯನ್‌ ಪಟ್ಟ ಮುಡುಗೇರಿಸಿಕೊಂಡ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಸೇರಿದಂತೆ ಹಲವರು ಅಭಿನಂದನೆ ತಿಳಿಸಿದ್ದಾರೆ. ಇತ್ತ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವ್ರು 1.1 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

 

-masthmagaa.com

Contact Us for Advertisement

Leave a Reply