ಬಾಗಲಕೋಟೆ: ವ್ಯಕ್ತಿಯ ಹೊಟ್ಟೆಯಲ್ಲಿತ್ತು 187 ನಾಣ್ಯ

masthmagaa.com:

ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿದ್ದ 187 ಕಾಯಿನ್‌ಗಳನ್ನ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ದ್ಯಾಮಪ್ಪ ಹರಿಜನ ಅನ್ನೋ 58 ವರ್ಷದ ವೃದ್ಧ ನಾಣ್ಯಗಳನ್ನ ನುಂಗಿದ್ದರು. ಇನ್ನು ವೃದ್ಧ ದ್ಯಾಮಪ್ಪ ಪತ್ನಿ ಮೇಲೆ ಸಂಶಯ ಹಿನ್ನೆಲೆ ಕಳೆದ 35 ವರ್ಷದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು. ಈ ವೇಳೆ ನಾಣ್ಯಗಳನ್ನ ನುಂಗಿದ್ದಾರೆ ಎನ್ನಲಾಗಿದೆ. ಮಂಗಳವಾರ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಗ ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಎರಡೂವರೆ ಗಂಟೆಗಳ ಕಾಲ‌ ನಿರಂತರ ಶಸ್ತ್ರ ಚಿಕಿತ್ಸೆ ಮಾಡಿ ಅಂದಾಜು ಒಂದು ಕೆಜಿ ತೂಕದ 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 ನಾಣ್ಯ ಹಾಗೂ 1 ರೂಪಾಯಿಯ 80 ನಾಣ್ಯಗಳನ್ನ ಸೇರಿ ಒಟ್ಟು 187 ನಾಣ್ಯಗಳನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

-masthmagaa.com

Contact Us for Advertisement

Leave a Reply