ಕಂಗನಾ ವಿರುದ್ಧ FIR​​ ದಾಖಲಿಸುವಂತೆ ಕೋರ್ಟ್​ ಸೂಚನೆ

masthmagaa.com:

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲಿಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿದ್ದ ಕಾಸ್ಟಿಂಗ್ ಡೈರೆಕ್ಟರ್ ಸಾಹಿಲ್ ಸೈಯ್ಯದ್, ಕಂಗನಾ ಮತ್ತು ಆಕೆಯ ಸಹೋದರಿ ರಂಗೋಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಕಲಾವಿದರನ್ನು ಹಿಂದೂ-ಮುಸ್ಲಿಂ ಎಂದು ವಿಭಜಿಸಿದ್ದಾರೆ. ಜೊತೆಗೆ ಎರಡು ಕೋಮುಗಳ ನಡುವೆ ದ್ವೇಷ ಭಾವನೆ ಪ್ರಚೋದಿಸಿದ್ದಾರೆ ಅಂತ ಆರೋಪಿಸಿದ್ರು. ಅಲ್ಲದೆ ಕಂಗನಾ ಮಾಡಿದ್ದ ಕೆಲವೊಂದು ಟ್ವೀಟ್​​ಗಳನ್ನು ಕೂಡ ಸಾಕ್ಷಿಯಾಗಿ ನೀಡಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಅಲ್ಲದೆ ಕಂಗನಾ ರಾಣಾವತ್ ಓರ್ವ ಪ್ರಸಿದ್ಧ ನಟಿಯಾಗಿದ್ದು, ದೊಡ್ಡ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಾಗಿ ಅವರ ಟ್ವೀಟ್​ ತುಂಬಾ ಜನರನ್ನು ರೀಚ್ ಆಗುತ್ತೆ ಅಂತ ಸಾಹಿಲ್ ಸಯ್ಯದ್ ಮಾಹಿತಿ ನೀಡಿದ್ರು.

ಅರ್ಜಿ ವಿಚಾರಣೆ ನಡೆಸಿದ ಬಾಂದ್ರಾದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್​​ ಕೋರ್ಟ್​​​, ಕಂಗನಾ ಮತ್ತು ಆಕೆಯ ಸಹೋದರಿ ರಂಗೋಲಿ ವಿರುದ್ಧ ಎಫ್​​​​ಐಆರ್ ದಾಖಲಿಸುವಂತೆ ಬಾಂದ್ರಾ ಪೊಲೀಸರಿಗೆ ಸೂಚನೆ ನೀಡಿದೆ. ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆ ಈ ಆದೇಶವನ್ನು ನೀಡಿದ್ದು, ಐಪಿಎಲ್ ಸೆಕ್ಷನ್ 153 ಎ( ವಿವಿಧ ಗುಂಪುಗಳ ನಡುವೆ ಶತ್ರುತ್ವಕ್ಕೆ ಪ್ರಚೋದನೆ), 295 ಎ( ಧರ್ಮವನ್ನು ಅಪಮಾನಿಸುವ ಮೂಲಕ ಕೋಮು ಭಾವನೆ ಕೆರಳಿಸುವ ಚಟುವಟಿಕೆ) ಮತ್ತು 124ಎ ಅನ್ವಯ ದೇಶದ್ರೋಹದ ಆಧಾರದ ಮೇಲೆ ಇಬ್ಬರು ಮೇಲೂ ಪ್ರಕರಣ ದಾಖಲಿಸಬೇಕೆಂದು ಸೂಚಿಸಿದ್ದಾರೆ.

-masthmagaa.com

Contact Us for Advertisement

Leave a Reply