ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಯ್ತು ಗೊತ್ತಾ?

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಂಡಗದೂರು ಗ್ರಾಮದಲ್ಲಿ 63 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply