ಸಿಎಂ ಪರಿಹಾರ ನಿಧಿಗೆ 3 ತಿಂಗಳ ವೇತನ ನೀಡಿದ ಶಾಸಕ ಯತ್ನಾಳ್

masthmagaa.com:

ದೇಶಾದ್ಯಂತ 21 ದಿನಗಳ ಕಾಲ ಲಾಕ್​​ಡೌನ್ ಹೇರಿರೋದ್ರಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ನೆರವಾಗಲು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ. ತಮ್ಮ ಮೂರು ತಿಂಗಳ ವೇತನವನ್ನ ಸಿಎಂ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಯತ್ನಾಳ್, ಕೊರೋನಾ ಸೋಂಕು ಹರಡದಂತೆ ತಡೆಯಲು ಲಾಕ್​ಡೌನ್ ಹೇರಲಾಗಿದೆ. ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ದಿಟ್ಟ ನಿರ್ಧಾರಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಅವರು, ಆರ್ಥಿಕ ಬೆಂಬಲ ನೀಡುವುದು ನಮ್ಮ ಹೊಣೆ ಎಂದಿದ್ದಾರೆ. ಇದಕ್ಕಾಗಿ ಶಾಸಕರಿಗೆ ಸರ್ಕಾರ ನೀಡುವ ಮೂರು ತಿಂಗಳ ವೇತನವನ್ನ ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಡೆಯುವಂತೆ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply