ವಿಧಾನಪರಿಷತ್‌ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಮರು ಆಯ್ಕೆ!

mathmagaa.com:

ವಿಧಾನಪರಿಷತ್‌ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಹಂಗಾಮಿ ಸ್ಪೀಕರ್‌ ಸಭಾಪತಿ ರಘುನಾಥ್‌ ಮಲ್ಕಾಪುರೆ ಹೊರಟ್ಟಿ ಅವ್ರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ನಿನ್ನೆ ಸ್ಪೀಕರ್‌ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದ್ರು. ಇವರ ಹೊರತಾಗಿ ಯಾರೂ ನಾಮಪತ್ರ ಸಲ್ಲಿಕೆ ಮಾಡದ ಹಿನ್ನಲೆಯಲ್ಲಿ ಅವ್ರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ವಿಧಾನಪರಿಷತ್​ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಿದ್ದು, ಡಿಸೆಂಬರ್​ 23ರಂದು ಚುನಾವಣೆ ನಡೆಯಲಿದೆ. ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.

-masthmagaa.com

Contact Us for Advertisement

Leave a Reply